ಎನ್ನ ಭಿನ್ನಪ ಕೇಳು

Enna binnapa kelu dhanvantri

 

ಎನ್ನ ಭಿನ್ನಪ ಕೇಳು ಧನ್ವಂತ್ರಿ ದಯಮಾಡು ಸಣ್ಣವನು ಇವ ಕೇವಲ |
ಬನ್ನಬಡಿಸುವ ರೋಗವನ್ನು ಮೋಚನೆ ಮಾಡಿ ಚೆನ್ನಾಗಿ ಪಾಲಿಸುವುದು ಕರುಣಿ ||ಪ||

ಆರೋಗ್ಯ ಆಯುಶ್ಯ ಐಶ್ವರ್ಯವೆಂಬೋ ಈ ಮೂರುವಿಧ ವಸ್ತುಗಳು
ನಾರಾಯಣನ ಭಜಕರಾದವರ ಸಾಧನಕೆ ಪೂರ್ಣವಾಗಿಪ್ಪುವು
ಘೋರ ವ್ಯಭಿಚಾರ ಪರನಿಂದೆ ಪರ ವಿತ್ತಾಪಹಾರ ಮಾಡಿದ ದೋಷದಿ
ದರಿದ್ರರಾಗುವರು ಮೂರು ವಿಧದಿಂದಲಿ ಕಾರಣನು ನೀನೆ ದುಷ್ಕರ್ಮ ಪರಿಹರಿಸುವುದು ಹರಿಯೇ ||೧||

ವಸುಮತಿಯ ಮೇಲಿನ್ನು ಅಸುರ ಜನರ ಬಹಳ ವಶವಲ್ಲ ಕಲಿಯ ಬಾಧೆ
ಬಿಸಿಲಿಂದ ಪೀಡಿತವಾದ ಸಸಿಗಳಂತೆ ಶಿಶುಗಲು ನಾವಿಪ್ಪೆವು
ಅಸುರಾರಿ ನಿನ್ನ ಕರುಣಾಮೃತದ ಮಳೆಗರೆದು ಕುಶಲದಿ ಪಾಲಿಸುವುದು
ಕೆಸರಿಂದ ಕೆಸರು ತೊಳೆದಂತೆ ಕರ್ಮದ ಪಥವು ಅಸುನಾಥ ಹರಿಯೇ ಪೊರೆಯೋ ಸ್ವಾಮಿ ||೨||

ಆದಿವ್ಯಾಧಿಗಳು ಉನ್ಮಾದ ವಿಭ್ರಮ ನಾನಾ ಬಾಧೆಗೌಷಧವು ನೀನೆ
ಹೇ ದೇವ ನಿನ್ನ ಕರಕಲಶ ಸುಧೆಗರೆದು ಸಾಧುಗಳ ಸಂತೈಸುವಿ
ಮೋದಬಡಿಸುವಿ ನಿನ್ನ ಸಾಧಿಸುವರಿಗೆ ಶುಭೋದಯಂಗಳನಿವೀ
ಆದರಿಸಿ ಇವಗೆ ತವಪಾದ ಧ್ಯಾನವನಿತ್ತು ಸಾಧುಗಲೊಳಗಿತ್ತು ಮೋದಕೊಡು ಸರ್ವದಾ ||೩||

ಆನ್ಯರನು ಭಜಿಸದಲೆ ನಿನ್ನನೆ ಸ್ತುತಿಸುತ ನಿನ್ನ ಚಿಹ್ನೆಗಳ ಧರಿಸಿ
ನಿನ್ನವರನಿಸಿ ನಿನ್ನ ನಾಮೋಚ್ಚರಿಸಿ ನಿನ್ನಿಂದ ಉಪಜೀವಿಸಿ
ಅನ್ನ ಆರೋಗ್ಯಕ್ಕೆ ಅಲ್ಪ ಜೀವಿಗಳಿಗೆ ಇನ್ನು ಆಲ್ಪರಿಯಬೇಕೆ
ನಿನ್ನ ಸಂಕಲ್ಪ ಭಕ್ತರ ಪೋಷಕನೆಂಬ ಘನ್ನ ಬಿರುದಿನ್ನು ಉಲುಹೊ ಸಲಹೊ ||೪||

ನಿನ್ನವರಲಿ ಇವಗೆ ಇನ್ನು ರತಿಯನ್ನು ಕೊಟ್ಟು ನಿನ್ನವನೆಂದು ಅರಿದು
ನಿನ್ನ ನಾ ಪ್ರಾರ್ಥಿಸಿದ ಅನ್ಯರಿಗೆ ಅಲ್ಪರಿಯೆ ಎನ್ನ ಪಾಲಿಸುವ ದೊರೆಯೆ
ಎನ್ನ ಮಾತಲ್ಲವಿದು ಎನ್ನ ಹಿರಿಯರ ಮಾತು ಮನ್ನಿಸಬೆಕು ಕರುಣಿ
ಅನಂತ ಗುಣಪೂರ್ಣ ಗೋಪಾಲವಿಠಲ ಇನ್ನಿದನೆ ಪಾಲಿಸುವುದೋ ಪ್ರಭುವೇ ||೫||

Leave a Reply

Your email address will not be published.

Sumadhwa Seva © 2022